ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ.
ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ 11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.































