ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಾದ ಹಾಲ ನೊಣ ಮುಟ್ಟಬಲ್ಲುದೆ ?
ಕಿಚ್ಚಿನೊಳಗಣ ಗುಂಡ ಬೆಕ್ಕು ಮುಟ್ಟಬಲ್ಲುದೆ ?
ಮರುಜವಣಿಯ ಕಡ್ಡಿ ಕಯ್ಯಲಿದ್ದವಂಗೆ ಸರ್ಪ ಕಡಿಯಬಲ್ಲುದೆ ?
ಈ ತ್ರಿವಿಧವನರಿದವಂಗೆ ಹಿಂದೆ ಶಂಕೆಯಿಲ್ಲ ; ಮುಂದೆ ಭಿೀತಿಯಿಲ್ಲ.
ಕಳಂಕು ಇಲ್ಲದೆ ಅಮುಗೇಶ್ವರಲಿಂಗವು ಅಪ್ಪಿಕೊಂಡಿತ್ತು.
-ಅಮುಗೆ ರಾಯಮ್ಮ































