ರಣ ಬಿಸಿಲಿನ ನಡುವೆ ಈ ಜಿಲ್ಲೆಗಳಲ್ಲಿ ತಂಪೆರೆದ ಮಳೆರಾಯ.!

WhatsApp
Telegram
Facebook
Twitter
LinkedIn

 

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ರಣ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಬಿಸಿಲಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೊಚ ತಂಪೆದಿದ್ದಾನೆ.

ರಾಜ್ಯದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನರಿಗೆ ಕೊಂಚ ನಿಟ್ಟುಸಿರುಬಿಡುವಂತಾಯಿತು. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ.

ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ, ಬಸವಕಲ್ಯಾಣ, ಹುಲಸೂರು ಸೇರಿದಂತೆ ಹಲವೆಡೆ ಉತ್ತಮ ಮಳೆ ಸುರಿದಿದೆ.

ಇನ್ನು ಇಂದೂ ಕೂಡ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon