ಬೆಂಗಳೂರು: ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ: ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಮೀನುಗಾರರಿಗೆ ಎಚ್ಚರಿಕೆ: ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ ಇರಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ..
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ.ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರವಿರಲಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮತ್ತು ತುಮಕೂರು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
































