ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಲ್ಲವನ ನುಡಿ ಸರ್ವವೆಲ್ಲಕ್ಕೂ ನನ್ನಿ.
ಬೆಲ್ಲದ ಘಟ್ಟಿ ಸರ್ವವೆಲ್ಲಕ್ಕೂ ಮಧುರ.
ಕಳವಿಲ್ಲದವನ ನುಡಿ ಸರ್ವವೆಲ್ಲಕ್ಕೂ ದಿಟ.
ಹುಸಿ ಒಂದಕ್ಕೆ ದಿಟವೆರಡಕ್ಕೆ ಸಂದೇಹ ಮೂರಕ್ಕೆ ಬೀಡು.
ಮೂಕೊರೆಗನ ಶುದ್ಧಿಯೇತಕ್ಕೆ?ಆತುರವೈರಿ ಮಾರೇಶ್ವರಾ.
-ನಗೆಯ ಮಾರಿತಂದೆ































