ಹೊಸದುರ್ಗ: ನಿವೇಶನ ರಹಿತರಿಂದ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರಾಗಿರುವ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ 

ಗೊರವಿನಕಲ್ಲು ರಿ.ಸ.ನಂ. 86ರಲ್ಲಿ ನಿವೇಶನ, ವಸತಿ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು 2026ರ ಮಾರ್ಚ್ 13 ರಂದು ನಡೆದ ಆಶ್ರಯ ಸಮಿತಿ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಹೊಸದುರ್ಗ ಪುರಸಭೆ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಏಪ್ರಿಲ್ 30 ರೊಳಗಾಗಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಗಂಡ, ಹೆಂಡತಿ ಮತ್ತು ಮಕ್ಕಳ ಆಧಾರ್ ಕಾರ್ಡ್, ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ಇದರೊಂದಿಗೆ ದೇಶದ ಯಾವುದೇ ಭಾಗದಲ್ಲಿ ಸ್ವಂತ ನಿವೇಶನ, ಮನೆ ಹೊಂದಿಲ್ಲವೆಂದು 20 ರೂಪಾಯಿ ಛಾಪಾ ಕಾಗದಲ್ಲಿ ನೋಟರಿ ಮಾಡಿಸಿದ ಸ್ವಯಂ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.

ನಿಗದಿತ ಅವಧಿ ಮುಗಿದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೊಸದುರ್ಗ ಪುರಸಭಾ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon