ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಪರಾಧವ ಮಾಡಿದ ಭಟ ಅರಸಿಂಗೆ ಸಜ್ಜನನಪ್ಪನೆ ?
ವ್ರತಭ್ರಷ್ಟ, ನೇಮಕ್ಕೆ ಹಾನಿಯಾದವ.
ನಿತ್ಯಕೃತ್ಯವೆಂದು ಹಿಡಿದು ಬಿಟ್ಟವ.
ತ್ರಿವಿಧಮಲವನೊಲ್ಲೆನೆಂದು ತೊಟ್ಟವ.
ಇಂತೀ ಕಷ್ಟಗುಣದಲ್ಲಿ ನಡೆವ ದೃಷ್ಟಗಳ್ಳರ ನೋಡಾ.
ಇದು ಬಾಯೊಳಗಣ ಹುಣ್ಣು ಹೇವರಿಸಿದ ಮತ್ತೆ
ಇನ್ನಾವ ಠಾವಿನಲ್ಲಿ ನುಂಗುವ ?
ಈ ಹೇಹ[ಯ]ವ ಬಿಡಿಸಾ ಎನಗೆ ಸಂಗನಬಸವಣ್ಣಾ.ಬ್ರಹ್ಮೇಶ್ವರಲಿಂಗವಿಪ್ಪ ಠಾವ ತೋರಾ.
-ಬಾಹೂರ ಬೊಮ್ಮಣ್ಣ
































