ದಾವಣಗೆರೆ: 2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ.
ಅರ್ಜಿಗಳನ್ನು ಏಪ್ರಿಲ್ 15 ರಿಂದ ಪಡೆದುಕೊಂಡು ಮೇ 04 ರೊಳಗೆ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷಗಳ ಮಿತಿಯೊಳಗಿರಬೇಕು. ಅರ್ಹತಾ ಪರೀಕ್ಷೆ ಮತ್ತು ಮೇ 19ರಂದು ನಡೆಯುವ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ದಾವಣಗೆರೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದಾವಣಗೆರೆ, ಚನ್ನಗಿರಿ, ಜಗಳೂರು ತಾಲ್ಲೂಕುಗಳ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08192-263546 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.






























