ಬೆಂಗಳೂರು: ಇದೇ 8ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ.
ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ 7ರಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಫಲಿತಾಂಶ ಪ್ರಕಟಿಸುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಅವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸ ಲಾಗುವುದು ಎಂದು ತಿಳಿದುಬಂದಿದೆ.






























