ವಿದ್ಯಾರ್ಥಿಗಳನ್ನು ಸನ್ಮಾರ್ಗದಡೆಗೆ ತೋರಿಸುವ ಕೆಲಸ ಶಿಕ್ಷಕರದ್ದು: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನ ಸನ್ಮಾರ್ಗದಡೆಗೆ ಕೊಂಡೊಯ್ಯುವ ಕೆಲಸವನ್ನು ಶಿಕ್ಷಕರು ತಮ್ಮ ವೃತ್ತಿ ಬದುಕಿನಲ್ಲಿ ಮಾಡುತ್ತಿದ್ದಾರೆ ಇಂತಹ ಶಿಕ್ಷಕರಿಗೆ ನಾನು ಅನಂತವಾಗಿ ಆಭಾರಿಯಾಗಿರುತ್ತೇನೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ತಾಲೂಕಿನ ದೊಡ್ಡಸಿದ್ದವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳಿಂದ ನಿರ್ಮಿತವಾಗುತ್ತಿರುವ ಸಭಾಭವನ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು, ಮಕ್ಕಳಿಗೆ ಮನೆಯಲ್ಲಿ ತಾಯಿಯೇ ಮೊದಲ ಶಿಕ್ಷಕಿ ನಂತರದ ಜೀವನದ ವೃತ್ತಿಯಲ್ಲಿ ಶಿಕ್ಷಕರು ಅತ್ಯಂತ ಪ್ರಮುಖರಾಗಿದ್ದಾರೆ ಶಿಕ್ಷಕರು ಅದೆಷ್ಟ ವಿದ್ಯಾರ್ಥಿಗಳಿಗೆ ಅಕ್ಷರ ದಾನ ಮಾಡುವುದರ ಜ್ಞಾನದ ಸಂಪತ್ತನ್ನ ಬಿತ್ತುತ್ತಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಓದಿದಂತಹ ಅದೆಷ್ಟೋ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಗಳಲ್ಲಿ ಇದ್ದಾರೆ, ಶಾಲಾ-ಕಾಲೇಜುಗಳ ಹಂತದಲ್ಲಿ ವಿದ್ಯಾರ್ಥಿಗಳಿಗೆ ತಿದ್ದಿ ಬುದ್ದಿ ಹೇಳಿ ಸನ್ಮಾರ್ಗದಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವಲ್ಲಿ ಸಾಕಷ್ಟು ಪಾತ್ರವನ್ನು ಶಿಕ್ಷಕರು ವಹಿಸಿದ್ದಾರೆ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತೊಡಗಿಕೊಳ್ಳಬೇಕೆನ್ನುವುದು ಸಹ ಮನದಟ್ಟಾಗುವ ರೀತಿಯಲ್ಲಿ ಶಿಕ್ಷಕರು ಬೋಧಿಸುತ್ತಿದ್ದಾರೆ ಇಂತಹ ಶಿಕ್ಷಕರೊಂದಿಗೆ ನಾನು ಯಾವಾಗಲೂ ಸದಾ ಜೊತೆಗಿರುವೆ ಎಂದು ತಿಳಿಸಿದರು.

ದೊಡ್ಡ ಸಿದ್ದವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ್ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದೇವೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಗತ್ಯವಾಗಿ ಬೇಕಿರುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು ಶಾಸಕರ ಸ್ಪಂದಿಸಿ ಪಿಡಬ್ಲ್ಯೂಡಿ ಇಲಾಖೆಯಿಂದ ಶಾಲೆಗೆ ನಾಲಕ್ಕು ಕೊಠಡಿಗಳನ್ನು ಮಂಜೂರು ಮಾಡಿಕೊಡಲಾಗುವುದು ಎಂದು ಸ್ಥಳದಲ್ಲೇ ತಿಳಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದೇವರಾಜ್ ರೆಡ್ಡಿ, ನಗರ ಹಾಗು ಗ್ರಾಮಾಂತರ ಯೋಜನೆ ಇಲಾಖೆ ನಿವೃತ್ತ ನಿರ್ದೇಶಕರಾದ ಧನಂಜಯ ರೆಡ್ಡಿ, ವೆಂಕಟೇಶ ರೆಡ್ಡಿ, ಆರತಿ ಮಹಡಿ ಶಿವಮೂರ್ತಿ, ಲಿಂಗಬಸಪ್ಪ, ತಿಪ್ಪೇಸ್ವಾಮಿ, ಡಾ. ಸಿ ಎಲ್ ಶಿವಮೂರ್ತಿ, ಗುರುಮೂರ್ತಿ, ಕೃಷ್ಣಮೂರ್ತಿ, ಶ್ರೀನಿವಾಸ ರೆಡ್ಡಿ, ಬಾಬುರೆಡ್ಡಿ, ವರಲಕ್ಷ್ಮಿ, ಮಲ್ಲಿಕಾರ್ಜುನ್, ಸುರೇಶ ರೆಡ್ಡಿ, ಉಜೀರಪ್ಪ ಹಾಗೂ ಇತರರು ಇದ್ದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon