ಚಿತ್ರದುರ್ಗ: ತೋಟಗಾರಿಕಾ ಇಲಾಖೆಯ ಸಮನ್ವಯದೊಂದಿಗೆ ಅಧಿಕೃತ ಪರವಾನಗಿ ಪಡೆದು ನೀರಾ ಮಾರಾಟ ಮಾಡಲು ಅವಕಾಶವಿದೆ. ಆದರೆ ಕಾನೂನು ಉಲ್ಲಂಘಿಸಿ ಜಿಲ್ಲೆಯ ಕೆಲ ರೈತ ಸಂಘಗಳ ಪರವಾನಗಿ ಪಡೆಯದೆ ನೀರ ಮಾರಾಟ ಮಾಡುತ್ತಿವೆ. ಈ ಹಿಂದೆ ಎಚ್ಚರಿಕೆ ನೀಡಿದ್ದರೂ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಅಂತಹ ಸಂಘಗಳ ವಿರುದ್ಧ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಇದೇ ವೇಳೆ ಗಾಂಜಾ ಬೆಳೆಯುವುದರಿಂದ ಎದುರಿಸಬೇಕಾದ ಕಾನೂನು ಸಂಘರ್ಷದ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಬೆಳೆ ಸಮೀಕ್ಷೆ ಹಂತದಲ್ಲಿ ಸಮೀಕ್ಷಾಕಾರರಿಗೆ ಗಾಂಜಾ ಬೆಳೆಯ ಮಾಹಿತಿ ನೀಡಲು ತರಬೆತಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಗೂಡು ಅಂಗಡಿಗಳನ್ನು ತೆರವು ಮಾಡುವಂತೆ ನಗರ ಸಭೆ ಅಧಿಕಾರಿಗಳಿಗೆ ಆದೇಶಿಸಿದರು.
ಸಭೆಯಲ್ಲಿ ಉಪವಿಭಾಗಧಿಕಾರಿ ಡಾ.ಕೆ.ಜೆ.ಕಾಂತರಾಜು, ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶಿವಕುಮಾರ್, ಸತ್ಯನಾರಾಯಣ್ ರಾವ್ ಎಂ.ಜಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಸೇರಿದಂತೆ ಮತ್ತಿರರು ಇದ್ದರು.
































