ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಎನಗೆ ಮನೆ ಇಲ್ಲ, ಎನಗೆ ಧನವಿಲ್ಲ,
ಮಾಡುವುದೇನು ? ನೀಡುವುದೇನು ?
ಮನೆ ಧನ ಸಕಲಸಂಪದಸೌಖ್ಯವುಳ್ಳ
ನಿಮ್ಮ ಶರಣರ ತಪ್ಪಲಕ್ಕಿಯನಾಯ್ದು ತಂದು,
ಎನ್ನೊಡಲ ಹೊರೆವೆನಾಗಿ,ಅಮರೇಶ್ವರಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನಬಸವಣ್ಣಾ.
-ಆಯ್ದಕ್ಕಿ ಮಾರಯ್ಯ

































