ಚಿತ್ರದುರ್ಗ: ವರ್ಷವಿಡೀ ಕಚೇರಿ ಕೆಲಸದ ಒತ್ತಡದಲ್ಲಿರುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳು ಹೊಸ ಚೈತನ್ಯ ನೀಡುತ್ತವೆ. ಸದೃಢ ದೇಹದಿಂದ ಮಾತ್ರ ಸದೃಢ ಮನಸ್ಸನ್ನು ಹೊಂದಲು ಸಾಧ್ಯ ಎಂದು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕರಾದ ಎಚ್.ಟಿ. ಅಶೋಕ್ ಅಭಿಪ್ರಾಯಪಟ್ಟರು.
ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಖಜಾನೆ ವ್ಯಾಪ್ತಿಯ ಆರು ತಾಲ್ಲೂಕುಗಳ ಸಿಬ್ಬಂದಿಗಳ 2026-27ನೇ ಸಾಲಿನ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವμÁರ್ಂತ್ಯದ ಕೆಲಸದ ಒತ್ತಡದ ನಡುವೆ ಸಿಬ್ಬಂದಿಗಳು ಸಕ್ರಿಯವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದರು.
ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಡಿಸ್ಕಸ್ ಥ್ರೋ, ಗುಂಡು ಎಸೆತ, 100 ಮೀಟರ್ ಓಟ ಹಾಗೂ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪದಕ, ಪಾರಿತೋಷಕ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳ ಖಜಾನೆ ಸಿಬ್ಬಂದಿಗಳು ಈ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಏಳು ಕೋಟಿ, ನರಸಿಂಹಮೂರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ್, ಮದನ, ತಿಪ್ಪೇಸ್ವಾಮಿ ಇದ್ದರು.






























