ಶಿಕ್ಷಕರ ವರ್ಗಾವಣೆ ನಿಯಮಗಳಲ್ಲಿ ಮಹತ್ವದ ಬದಲಾವಣೆ.!

WhatsApp
Telegram
Facebook
Twitter
LinkedIn

ಬೆಂಗಳೂರು:ಹೌದು  ಶಿಕ್ಷಕರ ವರ್ಗಾವಣೆ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ `ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ- 2026`ರ ಜಾರಿಗೆ ಏಪ್ರಿಲ್ 10, 2026 ರಂದು ಅಧಿಸೂಚನೆ ಹೊರಡಿಸಲಾಗಿದೆ. ಈ ವಿಧೇಯಕಕ್ಕೆ ಗೌರವಾನ್ವಿತ ರಾಜ್ಯಪಾಲರು ಏಪ್ರಿಲ್ 9, 2026 ರಂದು ಅನುಮತಿ ನೀಡಿದ್ದರು.

ಶಾಲೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿ, ತುರ್ತು ಸೇವಾ ಗುಂಪು ಎಂದು ಪರಿಗಣಿಸಿ ಶಿಕ್ಷಕರ ವರ್ಗಾವಣೆ ಸ್ವರೂಪದಲ್ಲಿ ಅಮೂಲಾಗ್ರ ಬದಲಾವಣೆಗಳು ಮಾಡಲಾಗಿದೆ. ಶಿಕ್ಷಕರು ಕನಿಷ್ಠ 12 ವರ್ಷ ಒಂದೇ ಕಡೆ ಕರ್ತವ್ಯ ನಿರ್ವಹಿಸಿದ್ದರೆ ನಂತರ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಇನ್ನು ಮುಂದೆ ಅವಕಾಶ ದೊರೆಯಲಿದೆ. ಬೋಧಕೇತರ ಹುದ್ದೆಗಳಿಗೆ ಶಿಕ್ಷಕರ ನೇಮಕಕ್ಕೆ ನಿರ್ಬಂಧ ವಿಧಿಸಲಾಗಿದೆ. ಗರ್ಭಿಣಿ ಅಥವಾ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿರುವ ಶಿಕ್ಷಕರು ಬಯಸಿದ ಸ್ಥಳ ಆಯ್ಕೆಗೆ ಆದ್ಯತೆ. ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಹಿತ ಕಾಯುವುದೇ ಈ ವಿಧೇಯಕದ ಉದ್ದೇಶವಾಗಿದೆ.

ಈ ಮಸೂದೆಯಡಿಯಲ್ಲಿ, ಶಾಲೆಗಳನ್ನು ಮೂರು ವರ್ಗಗಳಾಗಿ ವರ್ಗೀಕರಿಸಲಾಗಿದೆ ಮತ್ತು ಬೋಧನೆಯನ್ನು ತುರ್ತು ಸೇವಾ ಗುಂಪಾಗಿ ಪರಿಗಣಿಸುವ ಮೂಲಕ ಶಿಕ್ಷಕರ ವರ್ಗಾವಣೆಯ ಸ್ವರೂಪವನ್ನು ಆಮೂಲಾಗ್ರವಾಗಿ ಪರಿವರ್ತಿಸಲಾಗಿದೆ. ಕೆಪಿಎಸ್, ಆದರ್ಶ ವಿದ್ಯಾಲಯಗಳು ಮತ್ತು ಪಿಎಂ ಶ್ರೀ ಶಾಲೆಗಳು ಎಂಬ ಮೂರು ನಿರ್ದಿಷ್ಟ ವಿಭಾಗಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಈಗ ಒಂದೇ ಸ್ಥಳದಲ್ಲಿ ಕನಿಷ್ಠ 12 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರವೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅರ್ಹರಾಗಿರುತ್ತಾರೆ. ಬೋಧಕೇತರ ಹುದ್ದೆಗಳಿಗೆ ಶಿಕ್ಷಕರನ್ನು ನೇಮಿಸುವುದರ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಗರ್ಭಿಣಿಯರು ಅಥವಾ ಐದು ವರ್ಷದೊಳಗಿನ ಮಗುವನ್ನು ಹೊಂದಿರುವ ಶಿಕ್ಷಕರಿಗೆ ಅಪೇಕ್ಷಿತ ಸ್ಥಳವನ್ನು ಆಯ್ಕೆ ಮಾಡಲು ವಿಶೇಷ ಆದ್ಯತೆ ನೀಡಲಾಗುವುದು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon