ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು,ಜನರನ್ನು ಕಂಗಾಲಾಗಿಸಿದೆ.
ಇದರ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ. 13 & 14 ರಂದು ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಸೂಚಿಸಿದೆ.

































