ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾ ಅವರಿಗೆ ಅಸ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಈಗಾಗಲೇ 14 ಆರೋಪಿಗಳನ್ನು ಬಂಧಿಸಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ಇದೀಗ ಅಶ್ಲೀಲ ಕಮೆಂಟ್ ಮಾಡಿದ್ದ ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಇನ್ನುಳಿದ 29 ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಬಲೆ ಬೀಸೀದ್ದಾರೆ. ನಟಿ ರಮ್ಯಾ ವಾರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ 43 ಆರೋಪಿಗಳ ಪೈಕಿ 14 ಮಂದಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಅವರ ವಿರುದ್ಧ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಉಳಿದ 29 ಆರೋಪಿಗಳ ವಿರುದ್ಧ ಅಬ್ ಸ್ಕ್ಯಾಂಡಿಂಗ್ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.
ಬಳಿಕ ಎಸಿಜೆ ಎಂ ಕೋರ್ಟ್ ಆರೋಪಿಗಳ ಪತ್ತೆಗೆ ಸೂಚನೆ ನೀಡಿತ್ತು. ಅದರಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ನಟಿ ರಮ್ಯಾ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಗೆ ಕೆಲ ಕಿಡಿಗೇಡಿಗಳು ಅಸ್ಲೀಲ ಕಮೆಂಟ್ ಮಾಡಿದ್ದರು. ಒಟ್ಟು 43 ಖಾತೆಗಳ ಸೋಷಿಯಲ್ ಮೀಡಿಯಾ ಖಾತೆಗಳ ವಿರುದ್ಧ ಸಿಸಿಬಿ ಪೊಲೀಸರಿಗೆ ನಟಿ ರಮ್ಯಾ ದೂರು ನೀಡಿದ್ದರು.

































