ಚಿತ್ರದುರ್ಗ: ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ ಹಾಗೂ ಮಹಿಳೆಯರ ಎಂಬ್ರಾಯಿಡರಿ ವರ್ಕ್ (ಆರಿ ವರ್ಕ್) ತರಬೇತಿ ನೀಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರ ಎಂಬ್ರಾಯಿಡರಿ ವರ್ಕ್ (ಆರಿ ವರ್ಕ್) ತರಬೇತಿ-30 ದಿನಗಳು ಹಾಗೂ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಅವಧಿ 31 ದಿನಗಳಾಗಿದ್ದು, ತರಬೇತಿಯು ಇದೇ ಏಪ್ರಿಲ್ 16 ರಿಂದ ಪ್ರಾರಂಭವಾಗದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಏಪ್ರಿಲ್ 16ರಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
































