ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸುಳ್ಳು ಸುದ್ದಿ ಹರಡಲಾಗಿದೆ. ಸುಳ್ಳು ಸುದ್ದಿಗಳಿಗೆ ಪೋಷಕರು, ವಿದ್ಯಾರ್ಥಿಗಳು ಕಿವಿಗೊಡಬಾರದು ಎಂದು ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮನವಿ ಮಾಡಿದೆ.
ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನಂಬಬೇಡಿ. ಎಸ್ಎಸ್ಎಲ್ಸಿ ಪರೀಕ್ಷೆ ಮೌಲ್ಯಮಾಪನ ಶುರುವಾಗಿದ್ದು, ಮುಂದಿನ ವಾರ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 23ರ ಬಳಿಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ರಾಜ್ಯ ಮಂಡಳಿ ಮಾಹಿತಿ ನೀಡಿದೆ.
































