–ಚಿತ್ರದುರ್ಗ; ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕೆಂದೇ ಹೆಸರಾಗಿರುವ ಮರ್ಚೆಂಟ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.
ನಿಕಟಪೂರ್ವ ಅಧ್ಯಕ್ಷರಾದ ಎಸ್.ಆರ್. ಲಕ್ಷ್ಮೀಕಾಂತರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣಾ ಪ್ರಕ್ರಿಯೆಗಳು ಬ್ಯಾಂಕಿನ ಜೆ.ಸಿ.ಆರ್. ಬಡಾವಣೆ ಶಾಖಾ ಕಚೇರಿಯಲ್ಲಿ ನಡೆದವು.
ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಘುರಾಮರೆಡ್ಡಿ ಒಬ್ಬರೇ ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರಿಂದ ಬ್ಯಾಂಕಿನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

































