ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗ ಶೇ 2ರಷ್ಟು ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ನೀಡಲು ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ.
ಈ ಹೆಚ್ಚಳವು 2026ರ ಜನವರಿ 1 ರಿಂದ ಅನ್ವಯವಾಗಲಿದ್ದು ಮೂಲ ವೇತನ/ಪಿಂಚಣಿಯ ಪ್ರಸ್ತುತದ ಶೇ 58 ದರಕ್ಕೆ ಹೆಚ್ಚುವರಿಯಾಗಿ ಸಿಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕವಾಗಿ ₹6,791.24 ಕೋಟಿ ಹೊರೆ ಬೀಳಲಿದೆ. ಇದರಿಂದ 50.46 ಲಕ್ಷ ನೌಕರರು ಮತ್ತು 68.27 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದರು.
































