ಏ.23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆಅಭ್ಯರ್ಥಿಗಳು ವಸ್ತ್ರ ಸಂಹಿತೆ ಪಾಲಿಸಲು ಕಡ್ಡಾಯ.!

WhatsApp
Telegram
Facebook
Twitter
LinkedIn

 

ಬೆಂಗಳೂರು:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ವಿವಿಧ ನೇಮಕಾತಿ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಜಾರಿಗೊಳಿಸಿದೆ. ಕೆಇಎ ವತಿಯಿಂದ ಇದೇ ಏ.23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‍ಗಳನ್ನು ಅನುಮತಿಸಲಾಗುವುದಿಲ್ಲ. ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸಬೇಕು. ಆದ್ಯತೆಯ ಮೇರೆಗೆ ಕಾಲರ್‍ರಹಿತ ಸಾಧಾರಣ ಶರ್ಟ್ ಅಥವಾ ಟಿ-ಶರ್ಟ್ ಧರಿಸುವುದು ಉತ್ತಮ. ಸರಳವಾದ ಪ್ಯಾಂಟ್ ಅಥವಾ ಕಮ್ಮಿ ಜೇಬುಗಳಿರುವ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ ಮತ್ತು ಜೀನ್ಸ್ ಪ್ಯಾಂಟ್ ಧರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಟ್ಟೆಗಳು ಹಗುರವಾಗಿರಬೇಕು. ದೊಡ್ಡ ಬಟನ್‍ಗಳು, ಜಿಪ್ ಪಾಕೆಟ್‍ಗಳು ಅಥವಾ ಹೆಚ್ಚಿನ ಕಸೂತಿ ಕೆಲಸವಿರುವ ಬಟ್ಟೆಗಳನ್ನು ಧರಿಸಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ನಿಷೇಧಿಸಲಾಗಿದೆ. ತೆಳುವಾದ ಅಡಿಭಾಗವಿರುವ ಚಪ್ಪಲಿ ಅಥವಾ ಸ್ಯಾಂಡಲ್‍ಗಳನ್ನು ಮಾತ್ರ ಧರಿಸಬೇಕು. ಕುತ್ತಿಗೆಯ ಸರ, ಕಿವಿಯೋಲೆ, ಉಂಗುರ ಅಥವಾ ಕಡಗಗಳಂತಹ ಯಾವುದೇ ಲೋಹದ ಆಭರಣಗಳನ್ನು ಧರಿಸುವಂತಿಲ್ಲ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು  ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರವನ್ನು ಹೊರತುಪಡಿಸಿ ಉಳಿದ ಯಾವುದೇ ಲೋಹದ ಆಭರಣಗಳನ್ನು ಧರಿಸಲು ಅನುಮತಿಯಿಲ್ಲ.

ಡ್ರೆಸ್ ಕೋಡ್ ಅನುಸರಿಸುವದರ ಜತೆಗೆ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್‍ಫೋನ್, ಬ್ಲೂಟೂತ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ಪೆನ್ಸಿಲ್, ಪೇಪರ್, ಎರೇಸರ್, ಜ್ಯಾಮಿತಿ ಬಾಕ್ಸ್, ಲಾಗ್ ಟೇಬಲ್ ಮತ್ತು ಟೋಪಿಗಳನ್ನು ನಿಷೇಧಿಸಲಾಗಿದೆ. ಮುಖ ಮುಚ್ಚುವ ಮಾಸ್ಕ್ ಧರಿಸುವಂತಿಲ್ಲ. ಪರೀಕ್ಷಾ ಕೊಠಡಿಯೊಳಗೆ ತಿಂಡಿ ತಿನಿಸುಗಳು ಹಾಗೂ ಬಣ್ಣದ ಅಥವಾ ಲೋಹದ ನೀರಿನ ಬಾಟಲಿಗಳಿಗೆ ಅನುಮತಿಯಿಲ್ಲ. ಕುಡಿಯುವ ನೀರಿನ ವ್ಯವಸ್ಥೆಯನ್ನು ಕೇಂದ್ರದಲ್ಲೇ ಮಾಡಲಾಗಿರುತ್ತದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರ, ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ತರುವುದು ಕಡ್ಡಾಯ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಯಾವುದೇ ಅಭ್ಯರ್ಥಿಗೆ ಹೊರಗೆ ಹೋಗಲು ಅವಕಾಶವಿರುವುದಿಲ್ಲ. ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು.!

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon