ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ವಾರಗಳ ಯುದ್ಧ ವಿರಾಮ ಅಂತ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಅದಕ್ಕೂ ಮುನ್ನವೇ ಅನಿರ್ದಿಷ್ಟಾವಧಿಗೆ ಯುದ್ಧ ವಿರಾಮ ವಿಸ್ತರಿಸಿರುವುದಾಗಿ ಘೋಷಿಸಿದ್ದಾರೆ.
ಇರಾನ್ ನಾಯಕರು ಮತ್ತು ಪ್ರತಿನಿಧಿಗಳು ಏಕರೂಪದ ಪ್ರಸ್ತಾವನೆಯೊಂದಿಗೆ ಬರುವವರೆಗೆ ಯುದ್ಧ ವಿರಾಮ ಮುಂದುವರಿಸುತ್ತೇವೆ. ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನದ ವಿನಂತಿಗೆ ತಾನು ಒಪ್ಪಿಕೊಂಡಿದ್ದೇನೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಹೇಳಿದ್ದಾರೆ.
ಇರಾನ್ ಪ್ರಸ್ತಾವನೆ ಸಲ್ಲಿಸುವವರೆಗೆ ಮತ್ತು ಚರ್ಚೆಗಳು ಒಂದು ನಿರ್ಣಾಯಕ ಹಂತಕ್ಕೆ ಬರುವವರೆಗೆ ಎರಡು ವಾರಗಳ ಹಿಂದೆ ಆರಂಭವಾದ ಯುದ್ಧ ವಿರಾಮ ವಿಸ್ತರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
































