ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಆರೋಗ್ಯ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ.
ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ ಎಂದು ವರದಿಯಾಗಿದೆ. ಸದ್ಯ ತೀವ್ರ ನಿಘಾ ಘಟಕದಲ್ಲಿ ಸಚಿವ ಡಿ ಸುಧಾಕರ್ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ
































