ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಕಳವಳಕಾರಿಯಾಗಿದ್ದು, ಆಸ್ಪತ್ರೆ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ ಎಂದರು.
ಶ್ವಾಸಕೋಶ ಕಸಿ ಮಾಡಬೇಕಾದರೆ ಮೆದಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸದ್ಯ ಸಚಿವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, ಇತರ ಅಂಗಾಂಗಗಳು ಸ್ಥಿರವಾಗಿವೆ. ಆದರೆ ಮೆದಳು ಮಾತ್ರ ಇನ್ನೂ ಸಕ್ರಿಯವಾಗಿಲ್ಲ. ನಾಳೆ ವೈದ್ಯರು ಸಿಟಿ ಸ್ಕ್ಯಾನ್ ನಡೆಸಲಿದ್ದು, ಅದರ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

































