ದಾವಣಗೆರೆ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗೌರವ ಸಂಭಾವನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತರು ಮೇ 15 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 19 ರಂದು ಬೆಳಿಗ್ಗೆ 11.00 ಗಂಟೆಗೆ ಕಾಲೇಜು ಆವರಣದಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ವೆಬ್ಸೈಟ್ www.mysore.nic.in ಅಥವಾ www.cavamysore.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2438931 ಸಂಪರ್ಕಿಸಲು ಕಾವಾ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































