ಬೆಂಗಳೂರು: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ.
ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲೆಗಳು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.






























