ಬೆಂಗಳೂರು: ರಾಜಧಾನಿಯಲ್ಲಿ ಮಳೆಯ ಅಬ್ಬರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ‘ಕಾವೇರಿ’ಯ ಮುಂಭಾಗದಲ್ಲೇ ಬೃಹತ್ ಮರವೊಂದು ಬುಡಸಮೇತ ಉರುಳಿ ಬಿದ್ದಿದೆ.!
4-5 ಮರವು ಕಾವೇರಿ ನಿವಾಸದ ಕಾಂಪೌಂಡ ಮೇಲೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ . ಮರ ಬಿದ್ದ ತಕ್ಷಣ ಎಚ್ಚೆತ್ತ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸಿಎಂ ನಿವಾಸದ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಿದರು. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಮರ ಉರುಳಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರಿನಲ್ಲಿ ಕಳೆದ 25 ವರ್ಷಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆ ಇದಾಗಿದ್ದು, ನಗರದಾದ್ಯಂತ 170ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಸಿಎಂ ನಿವಾಸದ ಬಳಿಯೇ ನಡೆದ ಈ ಘಟನೆಯು ಹಳೆಯ ಮರಗಳ ನಿರ್ವಹಣೆಯ ಬಗ್ಗೆ ಆತಂಕ ಮೂಡಿಸಿದೆ.
































