ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ। ಪುರುಷೋತ್ತಮ ಬಿಳಿಮಲೆ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಬಾಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದಕ್ಕೆ ಕಾರಣ ಏನು ಎಂದು ವರದಿಯನು ಸಲ್ಲಿಸಿದ್ದಾರೆ.
ಹಾಗೆ ಪ್ರಾಧಿಕಾರದ ಸದಸ್ಯರೂ ಆಗಿರುವ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಅವರ ಮಾರ್ಗದರ್ಶನದಲ್ಲಿ 8 ಮಂದಿ ಶಿಕ್ಷಕರನ್ನೊಳಗೊಂಡ ಸಮಿತಿ ಈ ಸಂಶೋಧನಾ ವರದಿ ಸಿದ್ಧಪಡಿಸಿದೆ.
ಎಸ್‌ಎಸ್‌ಎಲ್‌ಸಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದಕ್ಕೆ ಶಿಕ್ಷಣದಲ್ಲಿ ಏಕರೂಪತೆ ಕೊರತೆ ಸೇರಿ ವಿವಿಧ ದೋಷಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗುರುತಿಸಿದೆ. ಅಲ್ಲದೆ ಕನ್ನಡದತ್ತ ಆಸಕ್ತಿ ಮೂಡಿಸಲು 22 ಶಿಫಾರಸುಗಳನ್ನು ಮಾಡಿದೆ
ಗುರುವಾರ ‘ಕನ್ನಡ ನಾಡಿನ ಮಕ್ಕಳು ಕನ್ನಡದಲ್ಲೇಕೆ ನಪಾಸಾಗುತ್ತಾರೆ, ಶೀರ್ಷಿಕೆ ಅಡಿ ಸಿದ್ಧಪಡಿಸಿದ ಸಂಶೋಧನಾ ವರದಿಯನ್ನು
ರಾಜ್ಯದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡ ಒಂದು ಭಾಷೆಯಾಗಿ ಯಾವ ಸ್ಥಾನದಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಸಂಖ್ಯಾತ್ಮಕ, ದತ್ತಾಂಶ ಆಧಾರಿತ ಅಧ್ಯಯನ ನಡೆಯಬೇಕು. ಈ ಅಧ್ಯಯನವು ಎಸ್‌ಎಸ್‌ಎಲ್‌ಸಿ ಫಲಿತಾಂಶಗಳ ದತ್ತಾಂಶವನ್ನು ಆಧರಿಸಿದೆ. ಕನ್ನಡ ಭಾಷಾ ಶಿಕ್ಷಣದ ಸ್ಥಿತಿಯನ್ನು ಸಂಖ್ಯಾತ್ಮಕ ಮತ್ತು ವ್ಯಾಖ್ಯಾನಾತ್ಮಕ ದೃಷ್ಟಿಕೋನದಿಂದ ವಿಶ್ಲೇಷಿಸುವುದಾಗಿದೆ. ಕನ್ನಡ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳಲ್ಲಿನ ಸಾಧನೆಯನ್ನು ಇತರ ಭಾಷೆಗಳೊಂದಿಗೆ ಹೋಲಿಕೆ ಮಾಡುವ ಮೂಲಕ ಭಾಷಾ ಆಯ್ಕೆಯು ಶೈಕ್ಷಣಿಕ ಫಲಿತಾಂಶದ ಮೇಲೆ ಬೀರುವ ಪರಿಣಾಮವೇನು ಎಂಬುದು ಈ ಅಧ್ಯಯನದ ಉದ್ದೇಶ ಎಂದು ತಿಳಿಸಲಾಗಿದೆ.
































