ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮನಕ್ಕೆ ವ್ರತವ ಮಾಡಿ, ತನುವಿಗೆ ಕ್ರೀಯ ಮಾಡಬೇಕು.
ಇಂದ್ರಿಯಂಗಳಿಗೆ ಕಟ್ಟನಿಕ್ಕಿ, ಆತ್ಮನ ಸಂದೇಹವ ಬಿಡಿಸಿ ಕ್ರೀಯ ಮಾಡಬೇಕು.
ಹೀಂಗಲ್ಲದೆ ವ್ರತಾಚಾರಿಯಲ್ಲ.
ಮನಕ್ಕೆ ಬಂದಂತೆ ಹರಿದು, ಬಾಯಿಗೆ ಬಂದಂತೆ ನುಡಿದು,ಇಂತೀ ನಾ ವ್ರತಿಯೆಂದರೆ ಮೂಗನರಿಯದೆ ಮಾಣ ಏಲೇಶ್ವರಲಿಂಗನು.
-ಏಲೇಶ್ವರ ಕೇತಯ್ಯ
































