ದಾವಣಗೆರೆ: ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಪಂಚಮಸಾಲಿ ಮಠದ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ.
ಮೇ 04 ರಿಂದ ಮೇ 31ರವರೆಗೆ ಮಠದಲ್ಲಿ ನಡೆಯುವ ದೈನಂದಿನ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ಹೊರತುಪಡಿಸಿ, ಯಾವುದೇ ರೀತಿಯ ಸಭೆ, ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.
































