ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ̤ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon