ಮಹಾರಾಷ್ಟ್ರ: ಮಹಾರಾಷ್ಟ್ರಹಾಗೂ ಕರ್ನಾಟಕ ಗಡಿಯ ಹಳ್ಳಿಯಾಗಿರುವ ಮೋಠೆವಾಡಿ ಗ್ರಾಮದ ಮರಗುಬಾಯಿ ದೇವಸ್ಥಾನದಲ್ಲಿ ಈ ದುರಂತ ಸಂಭವಿಸಿದೆ. ಗೋಡೆ ಕುಸಿತ ಗೊಂಡು 6 ಭಕ್ತರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 15 ಜನರಿಗೆ ಗಂಭೀರ ಗಾಯಗಳಾಗಿದೆ.
ಗೋಡೆಯ ಕೆಳಭಾಗದಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಶಂಕ್ರ್ ವ್ಯಕ್ತವಾಗಿದೆ. ಬಿರುಗಾಳಿ, ಭಾರೀ ಮಳೆಗೆ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಗಾಯಾಳುಗಳನ್ನು ಜತ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜತ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
































