ದೆಹಲಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಸುಪ್ರೀಂಕೋರ್ಟ್ಲ್ಲಿ ಇಂದು ದೊಡ್ಡ ಆಘಾತ ಆಗಿದೆ.
ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇನ್ನು ಒಂದು ವರ್ಷದವರೆಗೆ ದರ್ಶನ್ಗೆ ಜಾಮೀನು ನೀಡಲು ನಿರಾಕರಿಸಿದೆ.
ಮುಂದಿನ ಒಂದು ವರ್ಷದಲ್ಲಿ ವಿಚಾರಣೆಯಲ್ಲಿ ಯಾವುದೇ ಪ್ರಗತಿಯಾಗದಿದ್ದಲ್ಲಿ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಆದೇಶಿಸಿದೆ. ಹೀಗಾಗಿ, ದರ್ಶನ್ಗೆ ಕನಿಷ್ಠ ಇನ್ನು ಒಂದು ವರ್ಷ ಜೈಲೇ ಗತಿಯಾಗಿದೆ.
































