ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
: ಹಿಂದಣ ಸುಖ, ಮುಂದಣ ದುಃಖಂಗಳು
ಮುಂದಣ ಸುಖ, ಹಿಂದಣ ದುಃಖಂಗಳು
ಇವ ತಾ ಸಂಧಿಸಿ ಅನುಭವಿಸಿದಲ್ಲಿ
ಸಂಚಿತ ಪ್ರಾರಬ್ಧ ಆಗಾಮಿಗಳೆಂದು
ಅಲ್ಲಿಯಲ್ಲಿ ಸಂಕಲ್ಪಿಸಿ ಕೇಳಲೇತಕ್ಕೆ?
ಹಿಂದೆ ಅಳಿದವರ ಕೇಳಿ, ಮುಂದೆ ಸಾವವರ ಕಂಡು
ಅಂದಂದಿಗೆ ನೂರು ತುಂಬಿತ್ತೆಂದು
ಸಂದೇಹ ನಿವೃತ್ತಿಯಾಗಿರಬೇಕು,
ಸಂಗನಬಸವಣ್ಣ ಸಾಕ್ಷಿಯಾಗಿಬ್ರಹ್ಮೇಶ್ವರಲಿಂಗವನರಿವುದಕ್ಕೆ.
-ಬಾಹೂರ ಬೊಮ್ಮಣ್ಣ





























