ಚಿತ್ರದುರ್ಗ: ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು, ಡಾ.ಎಪಿಜೆ ಅಬ್ದುಲ್ ಕಲಾಂ, ಮೌಲನಾ ಆಜಾದ್ ಪದವಿಪೂರ್ವ ಕಾಲೇಜುಗಳಿಗೆ ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 22 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಸೇವಾಸಿಂಧು ವೆಬ್ಸೈಟ್ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.






























