ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನಿಷ್ಠೆಯ ಮರೆದರೇನಯ್ಯಾ ?
ಲೋಕದ ಮನುಜರ ದೃಷ್ಟಿಗೆ ಸಿಲ್ಕಿ ಭ್ರಷ್ಟೆದ್ದುಹೋದರು.
ತನು ಕಷ್ಟಮಾಡಿದರೇನಯ್ಯಾ ಮನ ನಿಷ್ಠವಾಗದನ್ನಕ್ಕ ?
ತನು ಮನವೆರಡು ನಷ್ಟವಾಗಿ, ಘನವ ನೆಮ್ಮಿ,
ನಿಮ್ಮ ನೆನಹು ನಿಷ್ಪತ್ತಿಯಾದ ಶರಣರ
ಎನಗೊಮ್ಮೆ ತೋರಯ್ಯ, ನಿಮ್ಮ ಧರ್ಮ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
-ಹಡಪದ ಅಪ್ಪಣ್ಣ






























