ಚಿತ್ರದುರ್ಗ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಇದೇ ಮೇ 23ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಬಾಲಾಜಿ ಲೇ ಔಟ್ ಮದರ್ ತೆರೆಸ ವಿದ್ಯಾಸಂಸ್ಥೆ ಕಟ್ಟಡದ ಕೌಶಲ್ಯ ಕರ್ನಾಟಕ ಟ್ರೈನಿಂಗ್ ಸೆಂಟರ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಡಾ.ಎಂ.ರಾಮಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಡಿ.ಟಿ.ಶ್ರೀನಿವಾಸ್, ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಚಂದ್ರನಾಯ್ಕ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಹಾಗೂ ಜಿಲ್ಲೆಯ ಭೋವಿ ಸಮುದಾಯದ ಜನ ಪ್ರತಿನಿಧಿಗಳು, ಮುಖಂಡರು, ಗಣ್ಯರು ಭಾಗವಹಿಸುವರು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ವೈ.ರವಿಕುಮಾರ್ ತಿಳಿಸಿದ್ದಾರೆ.






























