ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಪಿಯುಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
2026-27ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದ್ದು, ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಅಭ್ಯರ್ಥಿಗಳಿಗೆ ಗರಿಷ್ಠ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ರೂ. 1.00 ಲಕ್ಷ ಆದಾಯ ಮಿತಿ ಇರಬೇಕಾಗುತ್ತದೆ.
ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್ ಸಂಪರ್ಕಿಸಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ಅರ್ಹತೆ ಮತ್ತು ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ https://bcwd.karnataka.gov.in/ ಅನ್ನು ವೀಕ್ಷಿಸಬಹುದು. ಆನ್‍ಲೈನ್ ಅರ್ಜಿಗೆ ಸಂಬಂಧಿಸಿದ ತಾಂತ್ರಿಕ ತೊಂದರೆಗಳಿದ್ದಲ್ಲಿ [email protected] ಗೆ ಇಮೇಲ್ ಕಳುಹಿಸಬಹುದು ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.































