ಚಿತ್ರದುರ್ಗ : ಬುಧವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.5 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 21.4 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 15.1 ಮಿ.ಮೀ, ಹಿರಿಯೂರು ತಾಲ್ಲೂಕು 9.9 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 2.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 3 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 11.4 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 15.2 ಮಿ.ಮೀ, ನಾಯಕನಹಟ್ಟಿ 27.7 ಮಿ.ಮೀ, ಪರಶುರಾಂಪುರ 19.7 ಮಿ.ಮೀ, ತಳಕು 19.3 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 7.7 ಮಿ.ಮೀ, ಭರಮಸಾಗರ 20.5 ಮಿ.ಮೀ, ಹಿರೇಗುಂಟನೂರು 11.8 ಮಿ.ಮೀ, ತುರುವನೂರು 27.6 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 8.3 ಮಿ.ಮೀ, ಐಮಂಗಲದಲ್ಲಿ 4.5 ಮಿ.ಮೀ, ಧರ್ಮಪುರದಲ್ಲಿ 17.7 ಮಿ.ಮೀ, ಜವನಗೊಂಡನಹಳ್ಳಿ 14.1 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.5 ಮಿ.ಮೀ, ಬಿ.ದುರ್ಗ 5.8 ಮಿ.ಮೀ, ರಾಮಗಿರಿ 1.5 ಮಿ.ಮೀ, ತಾಳ್ಯ 1.3 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.1 ಮಿ.ಮೀ, ಮಾಡದಕೆರೆ 3.3 ಮಿ.ಮೀ, ಮತ್ತೋಡು 5 ಮಿ.ಮೀ, ಶ್ರೀರಾಂಪುರ 2.4 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 15.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 9.9 ಮಿ.ಮೀ ಮಳೆಯಾಗಿದೆ.
10 ಮನೆಗಳಿಗೆ ಭಾಗಶಃ ಹಾನಿ: ಮಳೆಯಿಂದಾಗಿ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾಗೂ 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿ ಹಾಗೂ 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 1 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ ಹಾಗೂ 5ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.































