ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ಸ್ವಂತ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಚಿತ್ರದುರ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲ್ಲೂಕುಗಳ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್‍ಫೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು, ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್‍ಬುಕ್ ನಕಲು ಪ್ರತಿಯನ್ನು ಒದಗಿಸಬೇಕಿರುತ್ತದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳ ಸಮೇತ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon