ಚಿತ್ರದುರ್ಗ : ರಾಜಕೀಯ ಚತುರ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣರವರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ರವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರುಗಳಾದ ಎಂ.ಎ.ಸೇತುರಾಂ, ಪ್ರಧಾನ ಕಾರ್ಯದರ್ಶಿ ಇಮಾಮ್ ದಲಿತ ಮುಖಂಡ ಬಿ.ರಾಜಪ್ಪ ಜೆಜೆಹಟ್ಟಿ ಇವರುಗಳು ಪಕ್ಷದ ವರಿಷ್ಟರನ್ನು ಒತ್ತಾಯಿಸಿದ್ದಾರೆ.
ಏಳು ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಿದರೆ ಕೇವಲ ಮೊಳಕಾಲ್ಮುರು ಕ್ಷೇತ್ರವಲ್ಲ. ಇಡಿ ಜಿಲ್ಲೆಯ ಅಭಿವೃದ್ದಿಗೆ ನೆರವಾಗಲಿದೆ. ಹಾಗಾಗಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಸಚಿವ ಸ್ಥಾನ ನೀಡುವ ಮೂಲಕ ಬುಡಕಟ್ಟು ಜನಾಂಗದವರಿಗೆ ಸಾಮಾಜಿಕ ನ್ಯಾಯ ನೀಡುವಂತೆ ಎ.ಎ.ಸೇತುರಾಂ ಆಗ್ರಹಿಸಿದ್ದಾರೆ.

































