ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಅಂಗಳದಲ್ಲಿ ಲಾಬಿ ನಡೆಸುತ್ತಿರುವುದರಿಂದ ರಾಜ್ಯ ನೂತನ ಸಚಿವ ಸಂಪುಟ ರಚನೆ ಕಗ್ಗಂಟಾಗಿದೆ.
ನೂತನ CM ಜೊತೆಗೆ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ (KPCC ಅಧ್ಯಕ್ಷ ಹುದ್ದೆಗೆ ಪರಿಗಣಿಸದಿದ್ದರೆ) MB ಪಾಟೀಲ್/ಈಶ್ವರ ಖಂಡ್ರೆ, ಕೆ.ಜೆ.ಜಾರ್ಜ್, KH ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, UT ಖಾದರ್, ರಾಮಲಿಂಗಾರೆಡ್ಡಿ ನೂತನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ತಿಳಿದುಬಂದಿದೆ.
































