ಬೆಂಗಳೂರು: ಇಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ರಾಜ್ಯದ ನೂತನ CM ಆಗಿ DK ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೀಗಾಗಿ, ಲೋಕಭವನ ಹಾಗೂ ಸುತ್ತ ಮುತ್ತ ಪ್ರದೇಶದಲ್ಲಿ ಜನಸಂದಣಿ ಸೇರುವ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
ಆದರಿಂದ ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ವಿಧಾನ ಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳಿಗೆ ಇಂದು ಅರ್ಧ ದಿನ ರಜೆ ನೀಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.































