ಬೆಂಗಳೂರು: ಲೋಕಭವನದ ಗಾಜಿನಮನೆಯಲ್ಲಿ ನಾಳೆ ಸಂಜೆ 4.05ಕ್ಕೆ ಸರ್ವ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿಕೆಶಿ CM ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ CM ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆಶಿ ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚಿಸಿದ್ದಾರೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಮುಂದಾಗಿದ್ದಾರೆ.































