ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮರುಳನ ಊಟದಂತೆ, ಮಯೂರನ ನಿದ್ರೆಯಂತೆ,
ಮಾರ್ತಾಂಡನ ಕಿರಣದಂತೆ, ಸ್ಫಟಿಕದ ಘಟದಂತೆ,
ಕಟಕದಲ್ಲಿ ತೋರುವ ಅಸಿಯ ರಸೆಯಂತೆ,
ಹೊದ್ದಿಯೂ ಹೊದ್ದದಂತೆ, ಇದ್ದೂ ಇಲ್ಲದಂತೆ,
ಕಂಡೂ ಕಾಣದಂತೆ ಕೇಳಿಯೂ ಕೇಳದಂತೆ,
ಇಪ್ಪ ಸುಳಿವ ಜಂಗಮಮೂರ್ತಿಯ ಕಂಡು
ನಮೋ ನಮೋ ಎಂಬೆನಾರಾಯಣಪ್ರಿಯ ರಾಮನಾಥಾ.
-ಗುಪ್ತ ಮಂಚಣ್ಣ






























