ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ದಿನಾಂಕ:03.06.2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.
ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸುವ ಸಚಿವ ಸಂಪುಟದ ನಿರ್ಧಾರದ ಮೇಲೆ ಉಚಿತ ಬಸ್ ಪಾಸ್ ನೀಡುವ ಸಂಬಂಧ ತಾತ್ವಿಕ ಅನುಮೋದನೆ ನೀಡಿ ಸಾರಿಗೆ ಇಲಾಖೆ ಗುರುವಾರ ಆದೇಶಿಸಿದೆ
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.
ಈ ಯೋಜನೆಯ ಅನುಷ್ಠಾನದ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ಸಚಿವ ಸಂಪುಟ ಪ್ರಕರಣ ಸಂಖ್ಯೆ:ಸಿ.310/2026, ದಿನಾಂಕ:03.06.2026ರನ್ವಯ ಹೊರಡಿಸಲಾಗಿದೆ.
(Ai ಚಿತ್ರ)































