ಚಿತ್ರದುರ್ಗ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಶಾಂತಿಸಾಗರ ನೀರು ಸರಬರಾಜು ಯೋಜನೆಯಡಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದಲ್ಲಿ ಮುಂದಿನ 5 ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಜೂನ್.6 ರಿಂದ 11ನೇ ತಾರೀಖಿನವರೆಗೆ ಸಾರ್ವಜನಿಕರು ತಮ್ಮ ತಮ್ಮ ಪ್ರದೇಶಗಳಲ್ಲಿ ಲಭ್ಯವಿರುವ ಕೊಳವೆ ಬಾವಿಗಳ (ಬೋರ್‍ವೆಲ್) ನೀರನ್ನು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನು ಬಳಸಿಕೊಳ್ಳಬೇಕು. ಅಲ್ಲದೆ, ನೀರನ್ನು ಅತ್ಯಂತ ಮಿತವಾಗಿ ಬಳಸಿ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಪೌರಾಯುಕ್ತರು ಕೋರಿದ್ದಾರೆ.




























