ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂನ್ 10ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ‘ಮಿನಿ ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ಈ ಉದ್ಯೋಗ ಮೇಳದಲ್ಲಿ ಒಟ್ಟು 7 ಪ್ರಮುಖ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿವೆ. ಇಂಡಿಯನ್ ಲಿಟರಸಿ ಪ್ರಾಜೆಕ್ಟ್ ಸಂಸ್ಥೆಯಲ್ಲಿ ಸ್ಪೋಕನ್ ಇಂಗ್ಲಿಷ್ ಫೆಸಿಲಿಟೇಟರ್, ಕಮ್ಯುನಿಟಿ ಫೆಸಿಲಿಟೇಟರ್ ಹಾಗೂ ಟೆಕ್ನಿಕಲ್ ಫೆಸಿಲಿಟೇಟರ್ ಹುದ್ದೆಗಳು ಖಾಲಿ ಇವೆ. ನವಭಾರತ್ ಫರ್ಟಿಲೈಸರ್ಸ್ ಎಲ್‍ಎಲ್‍ಪಿ ಹುಬ್ಬಳ್ಳಿಯವರು ಫೀಲ್ಡ್ ಮ್ಯಾನೇಜರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಕೋಟಕ್ ಮಹೀಂದ್ರಾ ಲೈಫ್ ಇನ್ಶೂರೆನ್ಸ್ ಸಂಸ್ಥೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳು, ಟಿಐಯುವಿ ರಿನೆಬಲ್ ಎನರ್ಜಿ ಹಾಗೂ ಹ್ಯಾಪಿ ಮೈಂಡ್ಸ್ ಸಲ್ಯೂಷನ್ ಸಂಸ್ಥೆಗಳಲ್ಲಿ ಟ್ರೈನಿ ಹುದ್ದೆಗಳು ಖಾಲಿ ಇವೆ. ಇದರೊಂದಿಗೆ ಸ್ವತಂತ್ರ ಮೈಕ್ರೋಫೈನಾನ್ಸ್ ಸಂಸ್ಥೆಯಲ್ಲಿ ಎಸ್‍ಎಫ್‍ಒ ಹುದ್ದೆಗಳು ಹಾಗೂ ಮುತ್ತೂಟ್ ಮೈಕ್ರೋಫಿನ್ ಸಂಸ್ಥೆಯಲ್ಲಿ ಬಿಆರ್‍ಎಂ, ಬಿಸಿಎಂ ಮತ್ತು ಸೂಪರ್‍ವೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎಸ್ಸಿ, ಬಿಸಿಎ, ಬಿಬಿಎ, ಎಂ.ಎಸ್.ಡಬ್ಲ್ಯೂ ಹಾಗೂ ಯಾವುದೇ ಪದವಿ ಅಥವಾ ಬಿ.ಇ/ಬಿ.ಎಸ್ಸಿ/ಎಂ.ಎ (ಇಂಗ್ಲಿಷ್) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಭಾಗವಹಿಸುವ ಅಭ್ಯರ್ಥಿಗಳಿಗೆ ಹುದ್ದೆಗಳ ಆಧಾರದ ಮೇಲೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿ 28, 30, 40 ರಿಂದ 45 ವರ್ಷದೊಳಗಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಫೋಟೋದೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ 7022459064, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.
( AI ಚಿತ್ರ)





























