ದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್ಗೆ 29 ರೂ. ಹೆಚ್ಚಳ ಮಾಡಲಾಗಿದೆ.
ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ.





























