ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಲ್ಲ ಬಿತ್ತಿ ನೀರನೆರೆದಲ್ಲಿ
ಪಲ್ಲವಿಸುವುದೆ ದಿಟದ ಬೀಜದ ವೃಕ್ಷದಂತೆ ?
ಶ್ರದ್ಧೆ ಸನ್ಮಾರ್ಗ ಭಕ್ತಿ ಇಲ್ಲದಲ್ಲಿ
ಗುರುಭಕ್ತಿ, ಶಿವಲಿಂಗಪೂಜೆ, ಚರಸೇವೆ
ತ್ರಿವಿಧ ಇತ್ತವೆ ಉಳಿಯಿತ್ತು.
ಮತ್ತೆ ನಿಜವಸ್ತುವಿನ ಸುದ್ದಿ ನಿಮಗೆತ್ತಣದೊ ?ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ವಿಶ್ವಾಸಬೇಕು.
-ಮೋಳಿಗೆ ಮಹಾದೇವಿ































